ಬೆಳಗಾವಿ : ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣಗೌಡ ಬಣದ 8 ರಿಂದ 12 ಮಂದಿ ಕಾರ್ಯಕರ್ತರ ವಿರುದ್ಧ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ನಾರಾಯಣಗೌಡ ನೇತೃತ್ವದಲ್ಲಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ಸಿಗದಕ್ಕೆ ಹಿರೇಬಾಗೇವಾಡಿ ಟೋಲ್‍ಗೇಟ್ ಬಳಿ ಕಲ್ಲು ತೂರಾಟ ನಡೆಸಲಾಗಿತ್ತು. ಮಹಾರಾಷ್ಟ್ರ ನೋಂದಣಿಯ ಲಾರಿಯ ಮೇಲೆ ಕಲ್ಲು ತೂರಿ ಗಾಜು ಪುಡಿ ಪುಡಿ ಮಾಡಲಾಗಿತ್ತು. ಅಲ್ಲದೇ ಕೆಲವು ವಾಹನಗಳ ನಂಬರ್ ಪ್ಲೇಟ್ ಕಿತ್ತು, ಮಸಿ ಬಳಿದ ಆರೋಪ ಕೇಳಿಬಂದಿತ್ತು.
ಹಿರೇಬಾಗೇವಾಡಿ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 143, 147, 341, 427, 149 ಅಡಿ 12 ಜನರ ವಿರುದ್ಧ ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ.










