ಕರುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಪೊಲೀಸ್ ವಶಕ್ಕೆ…

104
firstsuddi

ಕೋಲಾರ : ಕಾಮುಕನೊಬ್ಬ ಹಸುವಿನ ಕರು ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ.

ರಾಮರೆಡ್ಡಿ ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ಶಫೀ ಉಲ್ಲಾ ಎಂಬಾತ ಅತ್ಯಾಚಾರ ಎಸಗಿದ್ದಾನೆ. ಈ ಹಿಂದೆ ಹಸುವಿನ ಮೇಲೆ ಅತ್ಯಾಚಾರ ಎಸಗಿ ಶಫೀ ಉಲ್ಲಾ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಆ ವೇಳೆ ಗ್ರಾಮಸ್ಥರೇ ಬೈದು ಬುದ್ಧಿ ಹೇಳಿ ಸುಮ್ಮನಾಗಿದ್ದರು.

ಆದ್ರೆ, ಕಾಮುಕ ಶಫೀ ಉಲ್ಲಾ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಕರು ಅಸ್ವಸ್ಥಗೊಂಡಿದ್ದು, ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದಾರೆ. ಇತ್ತ ಬೇತಮಂಗಲ ಪೊಲೀಸರು ಶಫೀ ಉಲ್ಲಾನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.