ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ದರ್ಪ ತೋರಿದ ಶಾಸಕ ಎಂ.ಪಿ.ಕುಮಾರಸ್ವಾಮಿ.

196
firstsuddi

ಬೆಂಗಳೂರು : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ವಿಧಾನ ಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಸಕರ ಭವನದ ಆವರಣದಲ್ಲಿರುವ ಕಾರು ಪಾರ್ಕಿಂಗ್ ವಿಚಾರವಾಗಿ ನೈಟ್ ಬೀಟ್ ನಲ್ಲಿದ್ದ ಕಾನ್ಸ್ಟೇಬಲ್ ಚಂದ್ರಶೇಖರ್, ಹೆಚ್ಪಿ ನರಸಿಂಹಮೂರ್ತಿ ಅವರಿಗೆ ಅವಾಚ್ಯ ಶಬ್ದಗಳಿಂದ ಶಾಸಕರು ನಿಂದಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕಂಟ್ರೋಲ್ ರೂಂಗೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಂತೆ ಎಸಿಪಿ ಸ್ಥಳಕ್ಕೆ ಆಗಮಿಸಿದ್ದರು. ಶಾಸಕರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಆದರೆ ಘಟನೆ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.