ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 100 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,283ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್‍ನಲ್ಲಿ 100 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಇಂದು ಒಂದೇ ದಿನ 101 ಕೊರೊನಾ ಪ್ರಕರಣ ದಾಖಲಾಗಿದೆ.










