ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ 23 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,079ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು-14, ಹಾಸನ-3, ಧಾರವಾಡ, ಉಡುಪಿ, ಮಂಡ್ಯ, ದಾವಣಗೆರೆ, ಬಳ್ಳಾರಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 1,079 ಮಂದಿ ಸೋಂಕಿತರ ಪೈಕಿ 494 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 36 ಮಂದಿ ಬಲಿಯಾಗಿದ್ದಾರೆ. ಇನ್ನುಳಿದ 549 ಮಂದಿ ಸೋಂಕಿತರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










