ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,246ಕ್ಕೆ ಏರಿಕೆ…

118
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಕ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಒಂದೇ ದಿನ 99 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,246ಕ್ಕೆ ಏರಿಕೆಯಾಗಿದೆ. ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ 84 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 15 ಕೊರೊನಾ ಪ್ರಕರಣ ಪತ್ತೆಯಾಗಿದೆ. ಕಲಬುರಗಿ-5, ಬೆಂಗಳೂರು-6, ದಕ್ಷಿಣ ಕನ್ನಡ-2, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.