ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆ…

126
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಇಂದು ಒಂದೇ ದಿನ 67 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್‍ನಲ್ಲಿ 63 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 4 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.