ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ತಿದೆ, ಇದಕ್ಕೆ ಕಾರಣ ಬಿಜೆಪಿ ಕೆಲವೇ ಜನರ ಕೈಯಲ್ಲಿದೆ: ಜಗದೀಶ್ ಶೆಟ್ಟರ್.

75
firstsuddi

ಹುಬ್ಬಳ್ಳಿ: ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಬಿಜೆಪಿ ಕೆಲವೇ ಜನರ ಕೈಯಲ್ಲಿದೆ. ಅದರಿಂದ ಹೊರಬಂದರೆ ಮಾತ್ರ ಭವಿಷ್ಯ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ಕೆಲ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್ ಸಂತೋಷ್ ಅವರ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷರವರು ಮೊದಲು ತಮ್ಮ ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ. ಶಾಸಕರು ಹಾಗೂ ಮಾಜಿ ಶಾಸಕರನ್ನು ಉಳಸಿಕೊಳ್ಳಲಿ. ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ ಕಾರಿದ್ದಾರೆ.

ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಜೆಪಿ ನಾಯಕರು ಬಿಟ್ಟು ಬಿಡಲಿ. ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಇಡೀ ರಾಷ್ಟ್ರದಲ್ಲಿ ಬೆಳಗ್ಗೆ ಇಂದ ಸಾಯಂಕಾಲವರೆಗೂ ಆಪರೇಶನ್ ಮಾಡೋದು, ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ನಿಮ್ಮ ಕೆಲಸ. ದಿನದಿಂದ ದಿನಕ್ಕೆ ಬಿಜೆಪಿ ಪಕ್ಷ ಅಧೋಗತಿಗೆ ಹೋಗ್ತಿದೆ. ಬಿಜೆಪಿ ಮುಳುಗುತ್ತಿರೋ ಹಡಗು ಎಂದು ಟಾಂಗ್ ನೀಡಿದರು.

ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ತಿದೆ. ಇದಕ್ಕೆ ಕಾರಣ ಬಿಜೆಪಿ ಕೆಲವೇ ಜನರ ಕೈಯಲ್ಲಿದೆ. ಅದರಿಂದ ಹೊರಬಂದರೆ ಮಾತ್ರ ಭವಿಷ್ಯ. ಅದರಿಂದ ಹೊರಬರೋಕೆ ಆಗತ್ತೋ ಇಲ್ವೋ, ಆದರೆ ನಾನೇ ಹೊರಗೆ ಬಂದು ಬಿಟ್ಟಿದ್ದೇನೆ. ರಾಜ್ಯ ಬಿಜೆಪಿ ನಾಯಕರ ಪರಿಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ. ದೆಹಲಿಯಲ್ಲಿ ಕೂತ ನಾಯಕರು ಈ ಬಗ್ಗೆ ಯೋಚನೆ ಮಾಡಬೇಕು. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಆದರೆ ಕಾಂಗ್ರೆಸ್‌ಗೆ 136 ಸೀಟ್ ಬಂದಿದೆ ಎಂದರು.