ಬೆಂಗಳೂರು : 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಾರ್ಖಂಡ್‍ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕದಲ್ಲಿ ಜನತೆ ಮೈತ್ರಿ ಸರ್ಕಾರದ ಒಂದೂವರೆ ವರ್ಷ ಆಡಳಿತವನ್ನು ನೋಡಿದ್ದರು. ಹಾಗಾಗಿ ಇಂದು ಮತದಾರರು ಬಿಜೆಪಿಗೆ ಮತ ಹಾಕುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಉತ್ತರ ನೀಡಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರಬೇಕೆ, ಬೇಡವೇ ಎಂದು ನಿರ್ಧಾರವಾಗಬೇಕಿತ್ತು. ಹೀಗಾಗಿ ಜನಾದೇಶದ ವಿರುದ್ಧ ಕೆಲಸ ಮಾಡಿದವರಿಗೆ ಜನರು ತಮಗೆ ಸಿಕ್ಕ ಮೊದಲ ಅವಕಾಶದಲ್ಲಿ ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.










