ಕರ್ನಾಟಕದ ಹಲವೆಡೆ ಮುಂದುವರೆದ ಮಳೆ ಅಬ್ಬರ- ಶಿವಮೊಗ್ಗದಲ್ಲಿ ಮರ ಬಿದ್ದು ಓರ್ವ ಸಾವು…

40
firstsuddi

ಶಿವಮೊಗ್ಗ: ರಾಜ್ಯಾದ್ಯಂತ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಕೆಲವೆಡೆ ವರ್ಷದ ಮೊದಲ ಮಳೆಯಾಗಿದೆ.

ನಿನ್ನೆ ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಮೇತ ಮಳೆ ಶುರುವಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೊರೆಬೈಲು ಗ್ರಾಮದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಭಾರಿ ಗಾಳಿ, ಮಳೆಗೆ ಅಕೇಶಿಯಾ ಮರ ಬಿದ್ದು ಜಯಂತ್ ಭಟ್(64) ಎಂಬುವವರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.