ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ…

282
firstsuddi

ನವದೆಹಲಿ : ಕರ್ನಾಟಕ ಉಪ ಚುನಾವಣೆ ಹಾಗೂ ಮಹಾರಾಷ್ಟ್ರ, ಹರಿಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಸುದ್ದಿಗೋಷ್ಟಿ ನಡೆಸಿ ದಿನಾಂಕ ಪ್ರಕಟ ಮಾಡಿದರು. ಕರ್ನಾಟಕದಲ್ಲಿ ಅನರ್ಹಗೊಂಡಿರುವ 17 ಶಾಸಕರ ಪೈಕಿ 15 ಕ್ಷೇತ್ರದಲ್ಲಿ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅ.24 ಕ್ಕೆ ಫಲಿತಾಂಶ ಹೊರ ಬೀಳಲಿದೆ. ಕರ್ನಾಟಕದ ಗೋಕಾಕ್, ಅಥಣಿ, ರಾಣೆಬೆನ್ನೂರು, ಕಾಗವಾಡ, ಹಿರೇಕೆರೂರು, ಯಲ್ಲಾಪುರ, ಯಶವಂತಪುರ, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆ.ಆರ್. ಪೇಟೆ, ಕೆ.ಆರ್. ಪುರಂ, ಮಹಾಲಕ್ಷ್ಮೀ ಲೇಔಟ್, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.