ರಾಜ್ಯ ಸರಕಾರವು ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಐದು ವರ್ಷ ಸುಭದ್ರವಾಗಿ ಮುಂದುವರೆಯಲಿದೆ : ಡಾ. ಜಿ. ಪರಮೇಶ್ವರ್…

204
firstsuddi

ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಾ. ಜಿ. ಪರಮೇಶ್ವರ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶ ಕರ್ನಾಟಕ ಸಮ್ಮಿಶ್ರ ಸರಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯ ಸರಕಾರವು ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಐದು ವರ್ಷ ಸುಭದ್ರವಾಗಿ ಮುಂದುವರೆಯಲಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ಇದಕ್ಕೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಪಕ್ಷದ ಸಚಿವರು, ಶಾಸಕರು ಸಮ್ಮತಿ ಸೂಚಿಸಿದ್ದಾರೆ . ವಿಪಕ್ಷ ನಾಯಕರುಗಳ ಆಪರೇಷನ್ ಕಮಲ ಯಶಸ್ವಿಯಾಗುವುದಿಲ್ಲ. ಸರ್ಕಾರವನ್ನು ಬೀಳಿಸಲು ಬಿಜೆಪಿಗೆ ಅವಕಾಶ ನೀಡುವುದಿಲ್ಲ. ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುವುದೇ ನಮ್ಮೆಲ್ಲರ ಗುರಿ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ, ಗೃಹ ಸಚಿವ ಎಂ.ಬಿ ಪಾಟೀಲ್, ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.