ಧಾರವಾಡ : ನಮ್ಮ ದೇಶ ಒಂದೇ. ನಾವು ಚೀನಾ, ಪಾಕಿಸ್ತಾನದ ಜೊತೆ ಹೋರಾಡಬೇಕು. ಅದರ ಬದಲಾಗಿ ಕರ್ನಾಟಕ, ಮಹಾರಾಷ್ಟ್ರ ಎಂದು ಬಡಿದಾಡುವುದು ಅತ್ಯಂತ ದೌರ್ಭಾಗ್ಯದ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಗಡಿ ವಿಚಾರ ಮುಗಿದು ಹೋದ ಅಧ್ಯಾಯ. ಈ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಎರಡೂ ರಾಜ್ಯಗಳಿಗೆ ನ್ಯಾಯಯುತವಾಗಿ ನ್ಯಾಯಾಲಯ ತೀರ್ಪು ಕೊಡುತ್ತದೆ. ವಿವಾದಾತ್ಮಕ ಹೇಳಿಕೆಗಳನ್ನು ಕೊಡದಂತೆ ಮಹಾರಾಷ್ಟ್ರದ ನಮ್ಮ ಪಕ್ಷದ ಶಾಸಕರಿಗೆ ಹೇಳಿದ್ದೇನೆ. ನಮ್ಮ ರಾಜ್ಯದಲ್ಲಿ ಮರಾಠಿಗರು ಕನ್ನಡಿಗರ ಜೊತೆ ಹೊಂದಾಣಿಕೆಯಿಂದ ಇದ್ದಾರೆ. ಇಲ್ಲಿ ಯಾರಿಗೂ ತೊಂದರೆ ಇಲ್ಲ ಎಂದರು.
ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ. ಅದೇ ರೀತಿ ಮಹಾರಾಷ್ಟ್ರದ ಒಂದಿಂಚೂ ಜಾಗ ಕರ್ನಾಟಕಕ್ಕೆ ಬರುವುದಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಸಿಎಂ ಆದರೆ ರಾಜ್ಯದಲ್ಲಿ ಮತ್ತೆ ಹಿಂದೂಗಳ ಹತ್ಯೆ ಹೆಚ್ಚಾಗುತ್ತದೆ ಎಂಬ ಸಿ.ಟಿ.ರವಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಜೋಶಿ, ಸಿ.ಟಿ ರವಿ ಅವರ ಮನೆಗೆ ಮುತ್ತಿಗೆ ಹಾಕಿದ್ರೆ ನಾವು ಕಾಂಗ್ರೆಸ್ ನವರ ಮನೆಗೆ ಮುತ್ತಿಗೆ ಹಾಕುತ್ತೇವೆ. ನಮ್ಮ ಸಂಸ್ಕೃತಿ ಅಂತದ್ದಲ್ಲ. ಸಿದ್ದರಾಮಯ್ಯನವರು ಎಚ್ಚರಿಕೆಯಿಂದ ಇರಬೇಕು ಎಂದರು.










