ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ…

179
First Suddi

ಬೆಂಗಳೂರು : ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ಎಂ.ಎಸ್.ರಕ್ಷಾ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಕ್ಷಾ ರಾಮಯ್ಯ ಜೊತೆಗೆ ಮಿಥುನ್ ರೈ, ಹೆಚ್.ಎಸ್. ಮಂಜುನಾಥ್, ಮತ್ತು ನಲಪಾಡ್ ಹಾರೀಸ್ ಕೂಡ ಆಕಾಂಕ್ಷಿಗಳಾಗಿದ್ದರು. ಆದರೆ ಮಿಥುನ್ ರೈ ತಮ್ಮ ನಾಮಪತ್ರವನ್ನು ವಾಪಾಸ್ ಪಡೆದಿದ್ದರು. ಬಳಿಕ ನಲಪಾಡ್ ಹಾರೀಸ್ ಮತ್ತು ಎಂ.ಎಸ್.ರಕ್ಷಾ ರಾಮಯ್ಯ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು.
ನಲಪಾಡ್ ಹಾರೀಸ್ ಅವರು 64203 ಮತಗಳನ್ನು ಪಡೆದರೆ, ಎಂ.ಎಸ್.ರಕ್ಷಾ ರಾಮಯ್ಯ ಅವರು 57271 ಮತಗಳನ್ನು ಪಡೆದಿದ್ದರು. ಹಾರೀಸ್ ಅವರು ರಾಮಯ್ಯ ಅವರಿಗಿಂತ ಹೆಚ್ಚಿನ ಮತಗಳನ್ನು ಪಡೆದಿದ್ದರೂ ‘ಫೇಮ್’ ಕಮಿಟಿಯು ಹಾರೀಸ್ ಅವರನ್ನು ಅನರ್ಹಗೊಳಿಸಿತ್ತು. ಹೀಗಾಗಿ ಎಂ.ಎಸ್.ರಕ್ಷಾ ರಾಮಯ್ಯ ಅವರು ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.