ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ನಿನ್ನೆ ಸಂಜೆ 6 ಗಂಟೆಯಿಂದ ಮೇ 11 ರ ಬೆಳಗ್ಗೆ 6 ಗಂಟೆಯವರೆಗೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.
ಹೀಗಾಗಿ ಮುಂದಿನ ಮೂರು ದಿನ ರಾಜ್ಯದಲ್ಲಿ ಮೇ 8 , 9 , 10ರಂದು ಮದ್ಯ ಮಾರಾಟಕ್ಕೆ ನಿರ್ಬಂಧ ಬಿದ್ದಿದೆ. ಇನ್ನು ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಿಗೂ ಮೂರು ದಿನ ಚುನಾವಣಾ ಬೀಗ ಹಾಕುವಂತೆ ಆಯೋಗ ಸೂಚನೆ ನೀಡಿದೆ.
ಇನ್ನು ಮೂರು ದಿನಗಳ ಕಾಲ ಮದ್ಯ ಸಿಗುವುದಿಲ್ಲ ಎಂಬ ವಿಷಯ ತಿಳಿದ ಮದ್ಯಪ್ರಿಯರು ಮದ್ಯದ ಅಂಗಡಿಗಳಿಗೆ ಮುಗಿಬಿದ್ದಿದ್ದರು. ಅಲ್ಲದೆ ಮೂರು ದಿನಗಳಿಗೆ ಸಾಕಾಗುವಷ್ಟು ಮದ್ಯವನ್ನು ಖರೀದಿಸಿದರು.










