ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ಅವರು ನೇಮಕಗೊಂಡಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 24ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸ್ಸು ಮಾಡಿತ್ತು. ದಿನೇಶ್ ಕುಮಾರ್ ನಿವೃತ್ತಿ ನಂತರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.










