ಬೆಂಗಳೂರು : ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಿ.ಬಿ. ವರಾಳೆ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನ್ಯಾ.ವರಾಳೆ ಅವರನ್ನು ಸೆಪ್ಟೆಂಬರ್ 28 ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಬಡ್ತಿ ನೀಡುವಂತೆ ಶಿಫಾರಸು ಮಾಡಲಾಗಿತ್ತು.










