ಕಲಬುರಗಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ – ಕೈ ನಾಯಕರಿಂದ ಭವ್ಯ ಸ್ವಾಗತ…

59
firstsuddi

ಕಲಬುರಗಿ : ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ತಮ್ಮ ತವರು ಜಿಲ್ಲೆ ಕಲಬುರಗಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಕಲಬುರಗಿಯ ಸರಡಗಿ ವಿಮಾನ ನಿಲ್ದಾಣಕ್ಕೆ ಖರ್ಗೆ ಅವರು ಬಂದಿಳಿದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ವಿಮಾನ ನಿಲ್ದಾಣದಲ್ಲಿ ಖರ್ಗೆ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

ಬಳಿಕ ರಿಂಗ್ ರಸ್ತೆ ಮೂಲಕ ಗಂಜ್ ಪ್ರದೇಶದ ನಗರೇಶ್ವರ ಶಾಲೆ ಹತ್ತಿರ ಆಗಮಿಸಿದ ಖರ್ಗೆ ಅವರಿಗೆ ಜೆಸಿಬಿ ಮೂಲಕ ಹೂಮಳೆ ಸುರಿಸಿ ಭವ್ಯ ಸ್ವಾಗತ ಕೋರಿದರು. ಇಲ್ಲಿಂದ ಎನ್‍ವಿ ಮೈದಾನದವರೆಗೆ ಭವ್ಯವಾದ ಮೆರವಣಿಗೆ ನಡೆಯಲಿದೆ. ಬಳಿಕ ಕಲ್ಯಾಣ ಕ್ರಾಂತಿ ಸಮಾವೇಶ ನಡೆಯಲಿದೆ.