ಕಲಬುರಗಿಯಲ್ಲಿ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ : ಅಪ್ರಾಪ್ತ ಆರೋಪಿಯ ಬಂಧನ…

56
firstsuddi

ಕಲಬುರಗಿ : ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು 24 ಗಂಟೆಯಲ್ಲಿಯೇ ಬೇಧಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನು ಎಳೆದೊಯ್ದು ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಬಂಧಿತ 16 ವರ್ಷದ ಅಪ್ರಾಪ್ತ ಐಟಿಐ ವಿದ್ಯಾರ್ಥಿಯಾಗಿದ್ದು, ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

ಬಾಲಕ ಸದಾ ಮೊಬೈಲ್ ನಲ್ಲಿ ವಿಕೃತ ವಿಡಿಯೋಗಳನ್ನು ನೋಡುತ್ತಿದ್ದನು. ಇದರಿಂದ ಪ್ರೇರಿತಗೊಂಡು ಬಹಿರ್ದೆಸೆಗೆ ಹೊರಟ ಬಾಲಕಿಯನ್ನು ಹಿಂಬಾಲಿಸಿದ್ದಾನೆ. ಈತನನ್ನು ನೋಡಿ ಬಾಲಕಿ ಓಡಿ ಹೋದರೂ ಬೆನ್ನಟ್ಟಿ ಹಿಡಿದು ಕಬ್ಬಿನ ಗದ್ದೆಗೆ ಎಳೆದೊಯ್ದ ಆರೋಪಿ ಕೃತ್ಯ ನಡೆಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಎಸ್ ಪಿ ಇಶಾ ಪಂತ್, ಪ್ರಕರಣ ಭೇದಿಸಿದ ಸಿಬ್ಬಂದಿಗೆ 1 ರೂ. ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇನ್ನೂ ಶೀಘ್ರದಲ್ಲೇ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.