ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ…

39
firstsuddi

ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿದ್ದರು.

ಮಣಿಕಂಠ ರಾಠೋಡ್, ಪ್ರಿಯಾಂಕ್ ಖರ್ಗೆ ವಿರುದ್ದ ಪರಾಜಿತ ಬಿಜೆಪಿ ಅಭ್ಯರ್ಥಿಯಾಗಿದ್ದು, ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಮುಖ್ಯವಾಗಿ ರಾತ್ರಿಯೇ ಸ್ಟೇಷನ್ ಬೇಲ್ ಮೇಲೆ ಮಣಿಕಂಠ ರಾಠೋಡ್ ಹೊರ ಬಂದಿದ್ದಾನೆ.

ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಖರ್ಗೆ ಕುಟುಂಬ ಸಾಫ್ ಮಾಡುವುದಾಗಿ ಮಣಿಕಂಠ ಹೇಳಿದ್ದ ಆಡಿಯೋ ಚುನಾವಣೆ ಸಂದರ್ಭದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು. ಇದೀಗ ಚಿತ್ತಾಪುರ ಪೊಲೀಸರು ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ರಾಠೋಡ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಅದಾಗ್ಯೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್‌ಗೆ ಪೊಲೀಸರು ನೋಟಿಸ್ ನೀಡಿದ್ದಾರೆ.