ಕೊಪ್ಪಳ: 10 ವರ್ಷದ ಬಾಲಕಿಯೊಬ್ಬಳು ತೀವ್ರ ಅಸ್ವಸ್ಥಳಾಗಿ ಸಾವನ್ನಪಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರು ಸೇವಿಸಿ ಬಾಲಕಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ವಾಂತಿ ಭೇದಿಗೆ ತುತ್ತಾಗಿದ್ದ ನಿರ್ಮಲಾ ಈರಪ್ಪ ಬೆಳಗಲ್ ಎಂಬ 10 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವೆನೆಯಿಂದ 15 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ರು. ಇನ್ನು ಮೃತ ಬಾಲಕಿಗೆ ನಿನ್ನೆ ರಾತ್ರಿ ವಾಂತಿ ಬೇಧಿ ಕಾಣಿಸಿಕೊಂಡಿತ್ತು. ರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲಿಲ್ಲ. ಇಂದು ಬೆಳಿಗ್ಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯ್ತು. ಆದರೆ ಮನೆಯಲ್ಲಿಯೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿ ಆಸ್ಪತ್ರೆಗೆ ಕರೆದುಕೊಂಡು ಬರುವ ಮೊದಲೇ ಮೃತಪಟ್ಟಿದ್ದಳು.
ಗ್ರಾಮದಲ್ಲಿ ಈಗಾಗಲೇ ಹಲವರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವುದರಿಂದ ಕಲುಷಿತ ನೀರು ಸೇವನೆಯಿಂದಲೇ ವಾಂತಿ-ಭೇದಿ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.










