ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರ ಸಾವು…

258
firstsuddi

ತುಮಕೂರು : ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದರಬೆಟ್ಟದ ಕಲ್ಯಾಣಿಯಲ್ಲಿ ನಡೆದಿದೆ. ರೇಷ್ಮಾ(22), ಮುನೀರ್ ಖಾನ್(49), ಯಾರಬ್ ಖಾನ್(21), ಮುಬೀನ್ ತಾಜ್(21) ಹಾಗೂ ಉಸ್ಮಾನ್(14)ಮೃತ ದುರ್ಧೈವಿಗಳು. ಮೃತರು ಬೆಂಗಳೂರಿನ ಕೆಂಗೇರಿ ನಿವಾಸಿಗಳು ಎಂದು ತಿಳಿದು ಬಂದಿದ್ದು, ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಬಾಲಕ ಉಸ್ಮಾನ್ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈ ಸಂದರ್ಭದಲ್ಲಿ ರಕ್ಷಿಸಲು ಮುಂದಾದ ನಾಲ್ವರೂ ಕೂಡಾ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂಧಿ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಲು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.