ಕಳಸ : ಕರ್ನಾಟಕ ಬ್ಯಾಂಕ್ ಒಳಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೆಲ ಕಾಲ ಆತಂಕಕ್ಕೆ ಕಾರಣವಾಯಿತು. ಪಟ್ಟಣದ ಹೊರನಾಡು ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ನಲ್ಲಿ ಇಂದು ರಾತ್ರಿ 7:30 ಸಮಯದಲ್ಲಿ ಬ್ಯಾಂಕಿನ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಕಿಟ್ಟಿ ಕೆಯಿಂದ ಹೊರಬರುತ್ತಿದ್ದ ಬೆಂಕಿಯನ್ನು ಗಮನಿಸಿದ ಸ್ಥಳೀಯರೊಬ್ಬರ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ.ಬೆಂಕಿ ಅನಾಹುತದಿಂದ ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದ್ದು. ಕಳಸ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.










