ಕಳಸ : ಶಾಲೆ ಆರಂಭವಾದ ಬೆನ್ನಲ್ಲೇ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್-ಶಾಲೆ ಬಂದ್…

278
firstsuddi

ಮೂಡಿಗೆರೆ : ರಾಜ್ಯದಲ್ಲಿ ಶಾಲೆ ಆರಂಭವಾದ ಬೆನ್ನಲ್ಲೇ ಕಳಸ ತಾಲ್ಲೂಕಿನ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಶಾಲೆಯನ್ನು ಮುಚ್ಚಲಾಗಿದೆ. ತಾಲ್ಲೂಕಿನ ಜೆ.ಎಂ.ಇ ಶಾಲೆಯಲ್ಲಿ 15 ಮಂದಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದು, ಅವರಲ್ಲಿ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಉಳಿದ 13 ಮಂದಿ ಶಿಕ್ಷಕರ ವರದಿ ನೆಗೆಟಿವ್ ಬಂದಿದೆ. ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ, ಉಳಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೊರೊನಾ ಆತಂಕ ಉಂಟಾಗಿದ್ದು, ಶಾಲಾ ಆಡಳಿತ ಮಂಡಳಿ ಶಿಕ್ಷಕರ ಕೊರೊನಾ ವರದಿ ಬರುವ ಮುನ್ನವೇ ಶಾಲೆಗೆ ಕರೆಸಿಕೊಂಡಿರುವುದೇ ಇದಕ್ಕೆ ಕಾರಣವಾಗಿದೆ.