ಕಳಸ : ಹತ್ರಾಸ್ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಅಖಿಲ ಭಾರತ ಡಾ||ಬಿ.ಆರ್.ಅಂಬೇಡ್ಕರ್ ಸೈನ್ಯ ಆಗ್ರಹ…

219
firstsuddi

ಕಳಸ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಮನಿಷಾ ವಾಲ್ಮೀಕಿಯ ಮೇಲೆ ನಡೆದ ಅತ್ಯಾಚಾರದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಅಖಿಲ ಭಾರತ ಡಾ||ಬಿ.ಆರ್.ಅಂಬೇಡ್ಕರ್ ಸೈನ್ಯ ಕಳಸ ಆಗ್ರಹಿಸಿದೆ.
ಕಳಸ ನಾಡ ಕಚೇರಿ ಮುಂಬಾಗ ಅಖಿಲ ಭಾರತ ಡಾ||ಬಿ.ಆರ್.ಅಂಬೇಡ್ಕರ್ ಸೈನ್ಯದ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿ ನಂತರ ಉಪತಹಶಿಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಡಾ||ಬಿ.ಆರ್.ಅಂಬೇಡ್ಕರ್ ಸೈನ್ಯದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಮಾತನಾಡಿ ಉತ್ತರ ಪ್ರದೇಶದ ಅಮಾಯಕ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಲಾದ ನಾಲ್ಕು ಆರೋಪಿಗಳ ಮೇಲೆಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಡಾ||ಬಿ.ಆರ್.ಅಂಬೇಡ್ಕರ್ ಸೈನ್ಯ ಕಳಸ ಅಧ್ಯಕ್ಷ ಸತೀಶ್, ತಾಲ್ಲೂಕು ಸಂಚಾಲಕ ಶರತ್, ಸಂದೀಪ್, ಸುನೀಲ್, ಹರೀಶ್, ಅಭಿಷೇಕ್, ಜೈಕುಮಾರ್, ರಂಜಿತ್, ಮಂಜು ಇತರರು ಇದ್ದರು.