ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ನಾಲ್ಕು ದಿನಗಳಲ್ಲಿ ಸೋಂಕಿತರ ಪತ್ತೆ ಪ್ರಕರಣದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಕಳೆದ 24 ಗಂಟೆಯಲ್ಲಿ 3900 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 46,433ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 195ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ 46,433 ಸೋಂಕಿತರ ಪೈಕಿ 12,727 ಮಂದಿ ಸೋಮಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 32,134 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಈವರಗೆ 1568 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










