ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 48,513 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15,31,670ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ ಕೊರೊನಾ ಸೋಂಕಿಗೆ 768 ಮಂದಿ ಮೃತಪಟ್ಟಿದ್ದು, ಮೃತರ ಸಂಕ್ಯೆ 34,193ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 15,31,670 ಮಂದಿ ಸೋಂಕಿತರ ಪೈಕಿ 9,88,029 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 5,09,447 ಮಂದಿ ದೇಶದ ವಿವಿಧ ಆಸ್ಪತ್ರೆಗಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










