ಕಳೆದ 24 ಗಂಟೆಯಲ್ಲಿ ದೇಶದಲ್ಲಿ 73 ಮಂದಿ ಕೊರೊನಾಗೆ ಬಲಿ, ಸಾವಿರದ ಗಡಿ ದಾಟಿದ ಬಲಿಯಾದವರ ಸಂಖ್ಯೆ…

176
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1897 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 73 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 31,000ಕ್ಕೆ ಏರಿಕೆಯಾಗಿದ್ದು, ಬಲಿಯಾದವ ಸಂಖ್ಯೆ 1,007ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 31,000 ಸೋಂಕಿತರ ಪೈಕಿ 7,696 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೇಶದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ಶೇ.10.9 ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.