ಕಳ್ಳತನಕ್ಕೆ ಸಾಥ್ ನೀಡಿದ ಆರೋಪ ; ಪೊಲೀಸ್ ಕಾನ್ಸ್​ಟೇಬಲ್ ಸಸ್ಪೆಂಡ್…

60
firstsuddi

ಬೆಂಗಳೂರು: ಕಳ್ಳತನಕ್ಕೆ ಸಾಥ್ ನೀಡಿದ ಆರೋಪದ ಮೇಲೆ ಪೊಲೀಸ್ ಕಾನ್ಸ್​ಟೇಬಲ್ ನನ್ನು ಅಮಾನತುಗೊಳಿಸಲಾಗಿದೆ.

ನಗರದ ಬನಶಂಕರಿ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್ ಯಲ್ಲಪ್ಪ ಎಂಬಾತನನ್ನು ಸಸ್ಪೆಂಡ್ ಮಾಡಲಾಗಿದೆ. ಕೆಲದಿನಗಳ ಹಿಂದೆ ಮನೆ ಕಳ್ಳತನ ಮಾಡಿದ ಪ್ರಕರಣವೊಂದರಲ್ಲಿ ಬನಶಂಕರಿ ಪೊಲೀಸರು ಕಳ್ಳರನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಕಳ್ಳರು ಕಳ್ಳತನದಲ್ಲಿ ಅದೇ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್ ಯಲ್ಲಪ್ಪನವರ ಪಾತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಆಧಾರದ ಮೇಲೆ  ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಅವರು ಯಲ್ಲಪ್ಪನವರನ್ನು ವಿಚಾರಣೆ ನಡೆಸಿ ಅಮಾನತುಗೊಳಿಸುವಂತೆ ಆದೇಶ ನೀಡಿದ್ದಾರೆ.