ಶಿವಮೊಗ್ಗ: ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋದವರನ್ನ ಅವರು ಯೂಸ್ & ಥ್ರೋ ರೀತಿ ಟ್ರೀಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬಿತವಾಗಿ ಸರ್ಕಾರ ನಡೆಸುತ್ತಿಲ್ಲ. ತಮ್ಮ ಪಕ್ಷದ ಗುರಿ ನಾಡಿನ ಜನತೆಯು ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿದೆ ಎಂದು ಹೇಳಿದ್ದಾರೆ. ಬಿಜೆಪಿಯವರಿಗೆ ರಾಜ್ಯದ ಜನ ಅಧಿಕಾರ ನೀಡಿದಾಗ ಅವರಲ್ಲಿ ಸರ್ಕಾರ ನಡೆಸುವ ಅನುಭವ ಇರಲಿಲ್ಲ. ಈಗ ವಿರೋಧ ಪಕ್ಷದಲ್ಲಿ ಕೂತು ಕೆಲಸ ಮಾಡಿ ಎಂದು ಜನ ಹೇಳಿದ್ದಾರೆ. ಬಿಜೆಪಿಯಲ್ಲಿನ ಒಳಜಗಳಗಳು ಯಾವತ್ತೂ ಇದ್ದಿದ್ದೇ ಎಂದು ಹೇಳಿದ್ದಾರೆ.










