ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಆದರೆ ನೇಮಕಾತಿ ಆದೇಶ ಹೊರಬಿದ್ದ ಕೆಲವೇ ಹೊತ್ತಿನಲ್ಲಿ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು. ಇತ್ತೀಚೆಗೆ ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದರು. ಈಗ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಗುಲಾಂ ನಬಿ ಆಜಾದ್ ರಾಜೀನಾಮೆಯಿಂದ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇದು ಅತಿದೊಡ್ಡ ಆಘಾತವಾಗಿದೆ.










