ಕಾಂಗ್ರೆಸ್ ಆರು ವರ್ಷಗಳ ಕಾಲ ಕರ್ನಾಟಕವನ್ನು ಲೂಟಿ ಮಾಡಿ ಎಲ್ಲ ರೀತಿಯಲ್ಲೂ ರಾಜ್ಯ ದಿವಾಳಿಯಾಗಿತ್ತು : ಸಿ.ಟಿ. ರವಿ

286
firstsuddi

ಬೆಂಗಳೂರು : ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದ ಟ್ವೀಟ್‍ಗೆ ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ತಿರುಗೇಟು ನೀಡಿದ್ದಾರೆ. “ ಸಿದ್ದರಾಮಯ್ಯ ಅವರೇ, ನೀವು ಹಾಗೂ ಕರ್ನಾಟಕ ಕಾಂಗ್ರೆಸ್ ಕಳೆದ ಆರು ವರ್ಷಗಳ ಕಾಲ ಕರ್ನಾಟಕವನ್ನು ಲೂಟಿ ಮಾಡಿ ಎಲ್ಲ ರೀತಿಯಲ್ಲೂ ರಾಜ್ಯ ದಿವಾಳಿಯಾಗಿತ್ತು. ಆದರೆ ಈಗಾ ನೀವು ಯಾವ ಮುಖ ಇಟ್ಟುಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ಕೊಡಿ ಎಂದು ಹೇಗೆ ಕೇಳುತ್ತಿದ್ದೀರಿ? ನಿಮ್ಮ ನಿಘಂಟಿನಲ್ಲಿ ಅವಮಾನ ಮತ್ತು ನೈತಿಕತೆ ಎಂಬ ಪದವನ್ನು ತೆಗೆದುಹಾಕಿದ್ದೀರಾ? ಎಂದು ಪ್ರಶ್ನೆ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.