ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆಗೈದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು…

42
firstsuddi

ಗದಗ: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ನಡೆದಿದೆ.

ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ.

ಕೊಲೆಗೂ ಮುನ್ನ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು, ಕಣ್ಣಿಗೆ ಕಾರದಪುಡಿ ಎಸೆದು ಹಲ್ಲೆ ಮಾಡಿದ್ದಾರೆ. ನಂತರ ಶವ ತೂಗು ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಕಾರ್ಯಕರ್ತರಲ್ಲಿ ಆತಂಕ ಮೂಡಿದೆ.

ಮುಂಡರಗಿ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ಲ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.