ಬೆಂಗಳೂರು : ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಹಾಗೂ ಮಾಜಿ ಕೇಂದ್ರ ಸಚಿವ ಜಾಲಪ್ಪ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಮತೆ ಮಾಜಿ ಮುಖ್ಯಮಮಥ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ. ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ ನರೇಂದ್ರ ಮೋದಿ ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.