ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೆ ಕೊರೊನಾ.

54
firstsuddi

ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೆ ಕೊರೊನಾ ಕಾಣಿಸಿಕೊಂಡಿದೆ.

ಈ ಬಗ್ಗೆ ಪ್ರಿಯಾಂಕಾ ಗಾಂಧಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನನಗೆ ಮತ್ತೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮನೆಯಲ್ಲಿ ಐಸೋಲೇಟ್ ಆಗುತ್ತಿದ್ದೇನೆ. ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುತ್ತಿದ್ದೇನೆ ಎಂದಿದ್ದಾರೆ.

ಜೂನ್ ನಲ್ಲಿ ಪ್ರಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ.