ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆ ಕಾಣುತ್ತಿದ್ದು, ಇಂದು ಡಿಸಿಎಂ ಡಾ.ಜಿ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ಉಪಾಹಾರಕೂಟ ಸಭೆ ಬಳಿಕ ಕಾಂಗ್ರೆಸ್ ಪಕ್ಷದ 21 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟವನ್ನು ಶೀಘ್ರವೇ ಪುನಾರಚಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ನನ್ನ ಕೆಲಸ ಏನು ನಾನು ಅದನ್ನು ಮಾಡುತ್ತೇನೆ. ಸರ್ಕಾರಕ್ಕೆ ಏನೂ ಆಗುವುದಿಲ್ಲ ಸುಭದ್ರವಾಗಿರುತ್ತದೆ ಎಂದು ಹೇಳಿದರು.











