ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಅನುಭವಿಸುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ : ಡಿ.ಕೆ ಶಿವಕುಮಾರ್…

229
firstsuddi

ಬೆಂಗಳೂರು : ಚುನಾವಣಾ ಫಲಿತಾಂಶಕ್ಕೂ ಮುನ್ನ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಡಿ.ಕೆ ಶಿವಕುಮಾರ್ ಅವರು ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದು, ಚುನಾವಣಾ ಫಲಿತಾಂಶ ನನಗೆ ಆಶ್ಚರ್ಯ ತಂದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಇಷ್ಟೊಂದು ದೊಡ್ಡ ಸೋಲು ಅನುಭವಿಸುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವನ್ನು ಸಾಧಿಸಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ದೇವೇಗೌಡ ಅವರಂತಹ ಹಿರಿಯ ನಾಯಕರೇ ಸೋಲು ಕಂಡಿರುವುದು ಆಘಾತ ಉಂಟಾಗಿದೆ. ಪಕ್ಷದ ಸೋಲಿಗೆ ಸಭೆ ಸೇರಿ ಚರ್ಚೆ ನಡೆಸುತ್ತೇವೆ. ಪಕ್ಷಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಗಾಂಧಿ ಕುಟುಂಬ ಸದಾ ಪಕ್ಷದ ಏಳಿಗೆಗಾಗಿ ದುಡಿಯುತ್ತಿದ್ದು, ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ನಾಶವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.