ಮಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಬಳಿಕ ನಾನೇ ಮುಖ್ಯಮಂತ್ರಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಯಿಸಿದ್ದು, ಸಿದ್ದರಾಮಯ್ಯ ಅವರು ಹಗಲು ಗನಸು ಕಾಣುತ್ತಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ನಾನೇ ಮುಖ್ಯಮಂತ್ರಿ ಆಗುವುದು ಎಂದು ಹೇಳಿದ್ದರು. ಮೈತ್ರಿ ಸರ್ಕಾರ ಪತನವಾದ ಬಳಿಕ ಮತ್ತೆ ಅದನ್ನೇ ಹೇಳುತ್ತಿದ್ದಾರೆ. ಕಾಂಗ್ರೆಸ್ ಬುಗರಿ ಆಡಿಸಿದರೆ ನಾವು ಚಕ್ರ ತಿರುಗಿಸುತ್ತೇವೆ. ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಮುಂದಿನ ಮೂರುವರೆ ವರ್ಷ ಬಿ.ಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು.










