ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ವಿಧಿವಶ…

50
firstsuddi

ಚಿಕ್ಕಬಳ್ಳಾಪುರ: ಕಾಂಗ್ರೆಸ್‍ನ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ವೆಂಕಟಸ್ವಾಮಿಯವರಿಗೆ ಕಳೆದ ಒಂದು ತಿಂಗಳಲ್ಲೇ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 02:20ಕ್ಕೆ ನಿಧನರಾಗಿದ್ದಾರೆ.

ರಾಜ್ಯ ವಿಧಾನ ಸಭಾ ಚುನಾವಣಾ ಪ್ರಚಾರ ಮುಗಿಸಿ ಮನೆಗೆ ಬಂದಾಗ ಮೊದಲ ಬಾರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು. ಮತ್ತೆ ಎರಡು ಬಾರಿ ಹೃದಯಾಘಾತವಾಗಿತ್ತು. ಈಗ ಮೂರನೇ ಬಾರಿಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವೆಂಕಟಸ್ವಾಮಿಯವರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದು, ಸ್ವಗ್ರಾಮ ಸಾದಹಳ್ಳಿಯ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಕಾಂಗ್ರೆಸ್ ನಾಯಕರು ಆಗಮಿಸಲಿದ್ದಾರೆ.

2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ವೆಂಕಟಸ್ವಾಮಿಯವರು ಸಾಕಷ್ಟು ಜನಪ್ರಿಯತೆಯನ್ನು ಗಳಿಸಿಕೊಂಡಿದ್ದರು. 2013 ರಲ್ಲಿ ದೇವನಹಳ್ಳಿಯಿಂದ ಸ್ಪರ್ಧಿಸಿ, ಪಕ್ಷದ ಮುಖಂಡರ ಒಳ ಜಗಳದಿಂದ ಜೆಡಿಎಸ್ ಅಭ್ಯರ್ಥಿ ಮುಂದೆ ಸೋಲನ್ನು ಅನುಭವಿಸಿದ್ದರು. 2018 ರಲ್ಲಿ ಕೂಡ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಈ ಬಾರಿಯೂ ಸ್ಪರ್ಧಿಸುವ ಇಚ್ಛೆ ಹೊಂದಿದ್ದ ವೆಂಕಟಸ್ವಾಮಿಯವರಿಗೆ ಕ್ಷೇತ್ರದ ಟಿಕೆಟ್ ಕೈ ತಪ್ಪಿತ್ತು. ಇದರಿಂದ ಬೇಸರಗೊಂಡಿದ್ದರು.