ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್‍ಗೆ ಷರತ್ತುಬದ್ಧ ಜಾಮೀನು…

54
firstsuddi

ಕಲಬುರಗಿ : ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಫೆಬ್ರವರಿ. 8 ರಂದು ಆಯೋಜಿಸಿದ್ದ ಹಿಜಾಬ್ ಪರ ಪ್ರತಿಭಟನೆಯಲ್ಲಿ ಮಾತನಾಡುತ್ತ ಮುಕ್ರಂ ಖಾನ್, ಹಿಜಬ್ ತಂಟೆಗೆ ಬಂದರೆ ತುಂಡು, ತುಂಡು ಮಾಡಿ ಕತ್ತರಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಬಳಿಕ ಈ ಹೇಳಿಕೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು  ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ್ದರು.

ಬಳಿಕ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದುಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಹಿನ್ನೆಲೆ ಐಪಿಸಿ ಸೆಕ್ಷನ್ (153), (294) ಅಡಿಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್ ರನ್ನು ಹೈದರಾಬಾದ್ ನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಮುಕ್ರಂ ಖಾನ್ ಗೆ ಸೇಡಂ ಪಟ್ಟಣದ ಸಿವಿಲ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.