ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿಯಿಂದ ನೋಟಿಸ್ ಜಾರಿ…

56
firstsuddi

ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸಿಐಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ ಮಾಹಿತಿಗಳನ್ನು ದಿನಾಂಕ 25ರಂದು(ಇಂದು)ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾಗಿ ಸಾಕ್ಷಿಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.

ಇನ್ನೂ ಸಿಐಡಿ ನೋಟಿಸ್ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ಇದೊಂದು ಉಲ್ಲಾಸದಾಯಕ ವಿಚಾರ ಸಿಐಡಿ ದಾಖಲೆ ನೀಡುವಂತೆ ನನಗೆ ಸೂಚಿಸಿದೆ. ಪ್ರಕರಣ ಸಂಬಂಧ ಪುರಾವೆಗಳನ್ನು ಗ್ರಹಿಸಲು ಆಗದ ಇಲಾಖೆಯ ಅಸಮರ್ಥತೆಯನ್ನು ಇದು ತೋರಿಸುತ್ತದೆ. ಸರ್ಕಾರ ಪಿಎಸ್ಐ ಪರೀಕ್ಷೆ ಪಡೆದಿರುವ 57,000 ಯುವಕರಿಗೆ ಉತ್ತರಿಸಬೇಕಿದೆ ಎಂದಿದ್ದಾರೆ.