ಕಾಂತಾರ ಚಿತ್ರದ ‘ವರಾಹರೂಪಂ’ ಹಾಡು ಬಳಕೆಗೆ ಅನುಮತಿ.. ಆದರೂ ಹಾಡು ಬಳಸುವಂತಿಲ್ಲ!

90
firstsuddi

ತಿರುವನಂತಪುರಂ : ಕಾಂತಾರ ಚಿತ್ರದ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ. ಕೃತಿಚೌರ್ಯದ ಆರೋಪ ಮಾಡಿದ್ದ ‘ತೈಕ್ಕುಡಂ ಬ್ರಿಡ್ಜ್’ ಅರ್ಜಿಯನ್ನು ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.

ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ತೈಕ್ಕುಡಂ ಬ್ರಿಡ್ಜ್ ಕಾಂತಾರ ಸಿನಿಮದ ʼವರಾಹರೂಪಂʼ ಕೃತಿಚೌರ್ಯದ ಆರೋಪ ಮಾಡಿ ಕೇಸ್ ದಾಖಲಿಸಿತ್ತು. ಅರ್ಜಿಯನ್ನು ಮಾನ್ಯ ಮಾಡಿದ್ದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ನ್ಯಾಯಾಲಯ ಕಾಂತಾರ ನಿರ್ಮಾಪಕರಿಗೆ ವರಾಹರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು.

ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿತ್ತು. 

ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವರಾಹರೂಪಂ ಹಾಡು ವಿವಾದಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದರೂ ಸದ್ಯಕ್ಕೆ ಚಿತ್ರತಂಡ ಈ ಹಾಡು ಬಳಕೆ ಮಾಡುವಂತಿಲ್ಲ. ಈ ಸಂಬಂಧ ಕೇರಳದ ಪಾಲಕ್ಕಾಡ್‌ ನ್ಯಾಯಾಲಯದಲ್ಲಿ ತೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ. ಹೀಗಾಗಿ ಸದ್ಯಕ್ಕೆ ವರಾಹರೂಪಂ ಹಾಡನ್ನು ಬಳಸಲು ಸಾಧ್ಯವಿಲ್ಲ.