ಮೈಸೂರು: ಕಾಡಾನೆ ದಾಳಿಗೆ ರೈತ ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಸರಗೂರು ತಾಲ್ಲೂಕಿನ ನಡಹಡಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ರೈತನನ್ನು 65 ವರ್ಷದ ಚಿಕ್ಕೇಗೌಡ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ತಮ್ಮ ಜಮೀನಿನ ತಿಪ್ಪೆಗೆ ಕಸ ಚೆಲ್ಲಲು ಬಂದಿದ್ದಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.
ಪೊಲೀಸ್ ಇಲಾಖೆಯಿಂದ ಉಪ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲಕೃಷ್ಣ, ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದರು. ಈ ವೇಳೆ, ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುವ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.










