ಕಾಫಿ ಬೆಳೆಗಾರರನ್ನು ಕಡೆಗಣಿಸಿದ ಬಜೆಟ್ : ಅರೇನಳ್ಳಿ ಪ್ರಕಾಶ್.

87
firstsuddi

ಚಿಕ್ಕಮಗಳೂರು : ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕಾಫಿ ಉದ್ಯಮ ಮತ್ತು ಕಾಫಿ ಬೆಳೆಗಾರರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರೇನಳ್ಳಿ ಪ್ರಕಾಶ್ ಹೇಳಿದ್ದಾರೆ.

ಕಾಫಿ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಆ ಉದ್ದಿಮೆ ಲಕ್ಷಾಂತರ ಕಾರ್ಮಿಕರಿಗೆ ಬದುಕು ನೀಡಿದೆ, ಕಳೆದ ನಾಲ್ಕೈದು ವರ್ಷಗಳಿಂದ ನಿರಂತರವಾಗಿ ಸಂಭವಿಸಿದ ಅತಿವೃಷ್ಠಿ, ಅನಾವೃಷ್ಠಿ, ಬೆಲೆ ಕುಸಿತ, ಬೆಳೆ ಕುಂಠಿತ, ಕಾರ್ಮಿಕರ ಸಮಸ್ಯೆ, ಕಚ್ಚಾ ವಸ್ತುಗಳ ದುಬಾರಿ ಬೆಲೆ ಮತ್ತು ಕೊರೋನಾ ಸಂಕಷ್ಟದಿಂದ ಕಾಫಿ ಬೆಳೆಗಾರರು ಭಾರೀ ನಷ್ಟ ಅನುಭವಿಸಿ ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಫಿ ಬೆಳೆಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಕಾಫಿ ಬೆಳೆಗಾರರ ಮತ್ತು ಕಾಫಿ ಉದ್ಯಮದ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಅನೇಕ ಬಾರಿ ಮನವಿ ಮಾಡಲಾಗಿದೆ, ವಿತ್ತ ಸಚಿವರೊಂದಿಗೆ ಚರ್ಚಿಸಿ ಬೆಳೆಗಾರರ ಸಮಸ್ಯೆಗಳ ಕುರಿತು ಮನವರಿಕೆ ಮಾಡಲಾಗಿದ್ದು ಆ ಹಿನ್ನೆಲೆಯಲ್ಲಿ ಈ ಬಾರಿಯ ಜಜೆಟ್‍ನಲ್ಲಿ ಕೇಂದ್ರ ಸರ್ಕಾರ ತಮ್ಮ ಕೈಹಿಡಿಯಬಹುದೆಂದು ಕಾಫಿ ಬೆಳೆಗಾರರು ನಂಬಿದ್ದರು. ಆದರೆ ಈ ಬಾರಿಯೂ ಬಜೆಟ್‍ನಲ್ಲಿ ಕಾಫಿ ಉದ್ಯಮಕ್ಕೆ ಮತ್ತು ಕಾಫಿ ಬೆಳೆಗಾರರಿಗೆ ಯಾವುದೇ ಸಹಾಯ ಹಸ್ತ ಚಾಚದೇ ಕೇಂದ್ರ ಸರ್ಕಾರ ಬೆಳೆಗಾರರ ನಂಬಿಕೆ ಮತ್ತು ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.