ಕಾರಿಗೆ ಮದುವೆ ದಿಬ್ಬಣದ ಅಲಂಕಾರ ಮಾಡಿ ಗೋಸಾಗಾಟ…

97
firstsuddi

ಉಡುಪಿ : ಮದುವೆ ದಿಬ್ಬಣದ ಅಲಂಕಾರ ಮಾಡಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರಿನ ಮೇಲೆ ದಾಳಿ ನಡೆಸಿ ಗೋವುಗಳನ್ನು ರಕ್ಷಣೆ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಮದುವೆಗೆ ತೆರಳುವ ವಾಹನದ ರೀತಿ ಕಾರನ್ನು ಅಲಂಕಾರ ಮಾಡಲಾಗಿತ್ತು. ಡೆಕೋರೇಷನ್ ಮಾಡಿದ ಕಾರಿನಲ್ಲಿ ಹಸುಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಮಾಹಿತಿ ಆಧರಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ವೇಳೆ ಎರಡು ವಾಹನದೊಳಗೆ 16ಕ್ಕೂ ಹೆಚ್ಚು ಹಸುಗಳು ಇರುವುದು ಕಂಡುಬಂದಿದೆ. ಹಿಂಸೆ ಕೊಟ್ಟು ಕೈಕಾಲು ಹಾಗೂ ಕುತ್ತಿಗೆ ಬಿಗಿದ ಕಾರಣ ಎರಡು ಹಸುಗಳು ವಾಹನದೊಳಗೆ ಸಾವನ್ನಪ್ಪಿವೆ. ಇದರಿಂದ ಆಕ್ರೋಶಗೊಂಡ ಹಿಂದು ಜಾಗರಣ ವೇದಿಕೆ ಸದಸ್ಯರು ಕಾರಿನ ಗಾಜುಗಳನ್ನು ಪುಡಿ ಮಾಡಿದ್ದಾರೆ.

ವಿಷಯ ತಿಳಿದು ಕಾಪು ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಳ್ಳರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.