ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್…

49
firstsuddi

ಬೆಂಗಳೂರು: ಉದ್ಯಮಿ ಕೃಷ್ಣ ಯಾದವ್ (55) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಯಲಹಂಕ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸಂತೋಷ್ ಕುಮಾರ್ ಬಂಧಿತ ಆರೋಪಿ. ಮಾರ್ಚ್ 12ರಂದು ಬಾಗಲೂರು ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಕಾರಿನಲ್ಲಿ ಆಂಧ್ರ ಪ್ರದೇಶ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಶವ ಪತ್ತೆಯಾಗಿತ್ತು. ಕಾರಿನಲ್ಲಿ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳ ಪರಿಶೀಲಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಸೋಮವಾರ ರಾತ್ರಿ ಕೃಷ್ಣ ಯಾದವ್ ತಮ್ಮ ಪರಿಚಿತನಾಗಿರುವ ಸಂತೋಷನೊಂದಿಗೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಸಂತೋಷ್​ನ ಹೆಂಡತಿ ಹಾಗೂ ಪುತ್ರನ ಬಗ್ಗೆ ಕೃಷ್ಣ ಯಾದವ್ ಅವಾಚ್ಯ ಪದ ಬಳಸಿ ನಿಂದಿಸಿದ್ದರಂತೆ. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಕೊನೆಗೆ ಜಗಳ ವಿಕೋಪಕ್ಕೆ ತಿರುಗಿದಾಗ ಕಾರಿನಲ್ಲಿದ್ದ ಸ್ಕ್ರೂ ಡ್ರೈವರ್ ತೆಗೆದುಕೊಂಡ ಸಂತೋಷ್ ಕೃಷ್ಣ ಯಾದವ್​ಗೆ ಮನಬಂದಂತೆ ಇರಿದು ಹತ್ಯೆ ಮಾಡಿದ್ದ, ಬಳಿಕ ಕಾರನ್ನು ಬಾಗಲೂರು ಕ್ರಾಸ್ ಬಳಿ ಬಿಟ್ಟು ಪರಾರಿಯಾಗಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.