ಮಂಗಳೂರು : ಕಂಕನಾಡಿಯಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ 10.30ರ ಸುಮಾರಿಗೆ ಪ್ರಶಾಂತ್ ತನ್ನ ಪತ್ನಿಗೆ ಹುಷಾರಿಲ್ಲದ ಕಾರಣ ಆಸ್ಪತ್ರೆಗೆ ಹೋಗುವುದಾಗಿ ಹೇಳಿದ್ದ. ಸಂಜೆಯಾದರೂ ಪ್ರಶಾಂತ್ ಮನೆಗೆ ಬಾರದೇ ಇದ್ದಾಗ ಆತನ ಮನೆಯವರು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಶಾಂತ್ ಅವರ ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಹಚ್ಚಿದ ಪೊಲೀಸರು ಕಂಕನಾಡಿಯಲ್ಲಿ ಕಾರಿನಲ್ಲಿ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ಬರ್ಕೆ ಹಾಗೂ ಕದ್ರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.










