ಕಲಬುರಗಿ : ಕಾರಿನಿಂದ ಕಾರಿಗೆ ಡಿಕ್ಕಿ ಹೊಡೆದು ವ್ಯಕ್ತಿಯೋರ್ವನನ್ನು ಸಿನಿಮೀಯ ಶೈಲಿಯಲ್ಲಿ ಅಡ್ಡಗಟ್ಟಿ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಶರಣ ಸಿರಸಗಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ನಿನ್ನೆ ತಡರಾತ್ರಿ ಶಿವಲಿಂಗ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಿಂದಿನಿಂದ ಶಿವಲಿಂಗ್ ಅವರ ಕಾರಿಗೆ ಡಿಕ್ಕಿ ಹೊಡೆದು ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಶಿವಲಿಂಗ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಕೊಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಫರತಾಬಾದ್ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.










