ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಇನ್ನೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ನಗರದಲ್ಲಿ ನಡೆದಿದೆ. ರಾಘವೇಂದ್ರ ಜೋಷಿ(41), ಶ್ಯಾಮ್(44) ಮೃತ ದುರ್ಧೈವಿಗಳು ಎನ್ನಲಾಗಿದ್ದು, ಹಿರಿಯೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹಿರಿಯೂರು ಕಡೆಗೆ ತೆರಳುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.