ಕಾರು, ಟ್ರಕ್ ನಡುವೆ ಭೀಕರ ಅಪಘಾತ – ಐವರು ದಾರುಣ ಸಾವು…

75
firstsuddi

ಉತ್ತರ ಪ್ರದೇಶ : ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನ ಮಸ್ಸೂರಿ ಪ್ರದೇಶದ ದೆಹಲಿ-ಮೀರತ್ ರಸ್ತೆಯಲ್ಲಿ ನಡೆದಿದೆ.

ಇಂದು ಮುಂಜಾನೆ ಘಟನೆ ಸಂಭವಿಸಿದ್ದು, ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು ಒಂದು ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಇನ್ನು ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಾಖಂಡ್ ನ ಹರಿದ್ವಾರದಿಂದ ಗಾಜಿಯಾಬಾದ್ ಗೆ ಬರುವಾಗ ಈ ದುರಂತ ಸಂಭವಿಸಿದೆ.